ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಂದಿನ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ(ಬಿ.ಆರ್ ಗವಾಯಿ) ಹೆಸರನ್ನು ನ್ಯಾ.ಸಂಜಿವ್ ಖನ್ನಾ ಅವರು ಶಿಫಾರಸು ಮಾಡಿದ್ದಾರೆ.
ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ.ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಗವಾಯಿ ಅವರು ಮೇ.14 ರಂದು ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಮೇ.13 ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ನವೆಂಬರ್ 2024 ರಲ್ಲಿ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡರು.
ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್ 24, 1960 ರಂದು ಅಮರಾವತಿಯಲ್ಲಿ ಜನಿಸಿದರು. ಅವರು ಮಾರ್ಚ್ 16, 1985 ರಂದು ಬಾರ್ ಕೌನ್ಸಿಲ್ ಸೇರಿದರು. 2019 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.





