ದೇಶ- ವಿದೇಶ

ಶೀಘ್ರದಲ್ಲೇ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಕೇಂದ್ರ ಸ್ಥಾಪನೆ: ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12) ನೂತನ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ಈ ರಾಜ್ಯದಲ್ಲಿ ಹೊಸದಾಗಿ ಆರು ಪಾಸ್‌ಪೋರ್ಟ್‌ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಘೋಷಿಸಿದರು.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ್ಯಾಂತ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನೂತನ ಪಾಸ್‌ಪೋರ್ಟ್‌ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಿದ್ದಾರೆ. ಅಲ್ಲದೇ ಈ ಬಗ್ಗೆ ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಅಂಚೆ ಇಲಾಖೆಯೂ ಈ ನಿರ್ಣಯವನ್ನು ನನಸಾಗಿಸಲು ಬದ್ಧವಾಗಿದೆ. ಹೀಗಾಗಿ ಭಾರತದ 543 ಲೋಕಸಭಾ ಕ್ಷೇತ್ರಗಳಲ್ಲಿ ಹೊಸ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ದೇಶಾದ್ಯಂತ ಸುಮಾರು 6,000 ಅಂಚೆ ಕಚೇರಿಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

15 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

15 hours ago