ದೇಶ- ವಿದೇಶ

ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುವೆ: ರಾಜಣ್ಣ

ನವದೆಹಲಿ: ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್‌ ಮ್ಯಾನ್‌ ಒನ್‌ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ ಸಮಾವೇಶಕ್ಕೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಸಮಾವೇಶವನ್ನು ದಾವಣಗೆರೆ, ಮೈಸೂರು, ಹುಬ್ಬಳ್ಳಿ, ಬೆಂಗಳೂರು ಅಥವಾ ಚಿತ್ರದುರ್ಗದಲ್ಲಿ ನಡೆಸಲು ಆಲೋಚಿಸಲಾಗುತ್ತಿದೆ. ಅಲ್ಲದೇ ಈ ಸಮಾವೇಶದಲ್ಲಿ ಗ್ಯಾರಂಟಿ ಬಗ್ಗೆ ವಿಶ್ವಾಸ ಮೂಡಿಸಬೇಕಿದ್ದು, ಗ್ಯಾರಂಟಿ ಶಕ್ತಿ ತುಂಬಿದೆಯಾ ಎಂದು ತಿಳಿಯಬೇಕಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ನೀಡಲಾಗಿದೆ. ಇನ್ನೂ ಸಮಾವೇಶದ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಸಂಪೂರ್ಣವಾಗಿ ವಿವರಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ದಲಿತ ಸಿಎಂ ಕುರಿತು ಮಾತನಾಡಿದ ಅವರು, ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನ ಕೇಳಬಹುದು. ಅದರಲ್ಲಿ ತಪ್ಪೇನಿದೆ, ಈ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ. ಸಿಎಂ ಘೊಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ ಎಂದು ಹೈಕಮಾಂಡ್‌ ಹೇಳಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

2 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

2 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

2 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

2 hours ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

2 hours ago