ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್ ಮ್ಯಾನ್ ಒನ್ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ ಸಮಾವೇಶಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಮಾವೇಶವನ್ನು ದಾವಣಗೆರೆ, ಮೈಸೂರು, ಹುಬ್ಬಳ್ಳಿ, ಬೆಂಗಳೂರು ಅಥವಾ ಚಿತ್ರದುರ್ಗದಲ್ಲಿ ನಡೆಸಲು ಆಲೋಚಿಸಲಾಗುತ್ತಿದೆ. ಅಲ್ಲದೇ ಈ ಸಮಾವೇಶದಲ್ಲಿ ಗ್ಯಾರಂಟಿ ಬಗ್ಗೆ ವಿಶ್ವಾಸ ಮೂಡಿಸಬೇಕಿದ್ದು, ಗ್ಯಾರಂಟಿ ಶಕ್ತಿ ತುಂಬಿದೆಯಾ ಎಂದು ತಿಳಿಯಬೇಕಿದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿದೆ. ಇನ್ನೂ ಸಮಾವೇಶದ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಸಂಪೂರ್ಣವಾಗಿ ವಿವರಿಸಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ದಲಿತ ಸಿಎಂ ಕುರಿತು ಮಾತನಾಡಿದ ಅವರು, ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನ ಕೇಳಬಹುದು. ಅದರಲ್ಲಿ ತಪ್ಪೇನಿದೆ, ಈ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ ಘೊಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ ಎಂದು ಹೈಕಮಾಂಡ್ ಹೇಳಿದೆ ಎಂದು ತಿಳಿಸಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…