kamal hasan
ಬೆಂಗಳೂರು : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿ ಕನ್ನಡಿಗರಿಂದ ಪ್ರತಿಭಟನೆ ಹಾಗೂ ಛೀಮಾರಿಗೆ ಒಳಗಾಗಿರುವ ಬಹುಭಾಷ ನಟ ಕಮಲ್ ಹಾಸನ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ.
ಇಂದು ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದು ಸರಿ ಅಲ್ಲ ಎಂದು ಸಾಬೀತಾಗುವವರೆಗೂ ನಾನು ಯಾರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ನಾನು ಸಂವಿಧಾನ ಮತ್ತು ಕಾನೂನಿನಲ್ಲಿ ನಂಬಿಕೆಯುಳ್ಳವನು. ನನ್ನ ಪ್ರೀತಿ ಕರ್ನಾಟಕ,ಕನ್ನಡ,ತೆಲುಗು ಹಾಗೂ ಮಲಯಾಳಂಗೆ ಇದ್ದೇ ಇದೆ. ಅಜೆಂಡಾ ಇಟ್ಟು ರಾಜಕಾರಣ ಮಾಡುವವರನ್ನು ಹೊರತುಪಡಿಸಿ ಯಾರೂ ಇದನ್ನು ಅಲ್ಲಗೆಳೆಯುವುದಿಲ್ಲ ಎಂದಿದ್ದಾರೆ.
ಒಂದು ವೇಳೆ ನಾನಾಡಿದ್ದು ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ. ಇಲ್ಲದಿದ್ದರೇ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ ಎಂದು ಸಾಬೀತಾಗುತ್ತಿದೆ.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…