ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಲೇವಡಿ ಮಾಡಿದ್ದಾರೆ.
ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ದೇವಾನುದೇವತೆಗಳನ್ನು ತಮ್ಮ ಬ್ರಾಂಡ್ ಅಂಬಾಸಿಡರ್ ಅನ್ನಾಗಿ ಮಾಡಿಕೊಂಡಿದ್ದಾರೆ. ಶಿವನು ಆಶಿರ್ವಾದ ಮಾಡಿ ಎತ್ತಿ ಕೈ ಕಾಂಗ್ರೆಸ್‌ದು ಎಂಬುದು ಅವರ ವಾದವಾಗಿತ್ತು ಎಂದು ಹೇಳಿದ್ದಾರೆ. ಇದು ನಮ್ಮೆಲ್ಲರಿಗೂ ನಗುವನ್ನು ಉಂಟುಮಾಡಿತ್ತು ಎಂದು ಲಘುವಾಗಿ ಟೀಕಿಸಿದ್ದಾರೆ.
ರಾಜಕುಮಾರ ಸಂಸತ್‌ಗೆ ಬಂದಾಗ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿಲ್ಲ ಎಂಬುದು ಅವರ ವಾದವಾಗಿತ್ತು. ಆದ್ದರಿಂದಲೇ ಅವರು ಈ ಸ್ಟ್ಯಾಂಡಪ್ ಕಾಮಿಡಿ ಮಾಡಿದರು ಎಂದು ದೂರಿದರು.
ರಾಹುಲ್ ಗಾಂಧಿ ಅವರು ಹಿಂದೂ ಧರ್ಮ, ಹಿಂದೂ ಸಮುದಾಯ ಹಾಗೂ ದೇವರುಗಳನ್ನು ಅವಮಾನಿಸಿದ್ದಾರೆ. ಇವರೆಲ್ಲರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದು ಹಿಂಸಾತ್ಮಕ ಭಾವನೆಗಳನ್ನು ಮೂಡಿಸಲು ಪೇರೇಪಿಸಿದ್ದಾರೆ ಎಂದು ಆರೋಪಿಸಿದ ಕಂಗನಾ, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…