ದೇಶ- ವಿದೇಶ

ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿ

ಹೊಸದಿಲ್ಲಿ: ಮೊನ್ನೆಯಷ್ಟೇ (ಜೂನ್‌ 4) ಹೊರಬಿದ್ದ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಜಯಭೇರಿ ಬಾರಿಸಿ ಸಂಸದೆಯಾಗಿ ಆಯ್ಕೆಯಾದ ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿರುವ ಕಂಗನಾ ಜಯದ ಖುಷಿಯಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರು. ಈ ವೇಳೆ ಚಂಡೀಗಢ ವಿಮಾನ ನಿಲ್ದಾಣದ ನಿರ್ಬಂಧಿತ ಸ್ಥಳದಲ್ಲಿ ತಾನು ನಿಂತಿದ್ದಾಗ ಸಿಐಎಸ್‌ಎಫ್‌ ಮಹಿಳಾ ಕಾನ್ಸ್ಟೇಬಲ್‌ ಕಪಾಳಮೋಕ್ಷ ಮಾಡಿದ್ದಾಗಿ ಸ್ವತಃ ನಟಿ ಕಂಗನಾ ಆರೋಪಿಸಿದ್ದಾರೆ. ದೆಹಲಿ ತಲುಪಿದ ಕೂಡಲೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕರಾದ ನೀನಾ ಸಿಂಗ್‌ ಅವರಿಗೆ ಘಟನೆಯ ಬಗ್ಗೆ ಮಾಹಿತಿಯನ್ನೂ ನೀಡಿದ್ದಾರೆ.

ಇನ್ನು ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಮಹಿಳಾ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

13 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

35 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

6 hours ago