ಕರಾಚಿ(ಪಾಕಿಸ್ತಾನ): ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಭೀಕರ ಬಿಸಿಗಾಳಿ ಎದುರಾಗಿದ್ದು, ಬಿಸಿಗಾಳಿಯ ತೀವ್ರತೆಯಿಂದ ಕರಾಚಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಧಿ ಫೌಂಡೇಶನ್ ಇಂದು(ಜೂ.26) ತಿಳಿಸಿದೆ.
ದೇಶದ ಅತಿದೊಡ್ಡ ನಗರ ಹಾಗೂ ಬಂದರು ನಗರವಾಗಿರುವ ಕರಾಚಿಯಲ್ಲಿ ಶನಿವಾರದಿಂದ(ಜೂ.22) 40ಕ್ಕಿಂತ ಹೆಚ್ಚು ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿದೆ.
ಕರಾಚಿಯಲ್ಲಿ ಶವಗಳನ್ನು ಇಡಲು ಶವಾಗಾರದಲ್ಲಿ ಜಾಗ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸಾವಿನ ಮತ್ತಷ್ಟು ಹೆಚ್ಚಾಗುತ್ತಿದ್ದು, ಈ ಶವಗಳ ಪೈಕಿ ಹೆಚ್ಚು ತಾಪಮಾನದ ಹೊರತಾಗಿಯೂ, ವಿದ್ಯುತ್ ಆಭಾವ ಎದುರಿಸುತ್ತಿರುವ ಪ್ರದೇಶಗಳಿಂದ ಬಂದ ಶವಗಳೇ ಹೆಚ್ಚು ಎಂಬುದು ಆಘಾತಕಾರಿ ಎಂದು ಎಧಿ ಫೌಂಡೇಶನ್ ಮುಖ್ಯಸ್ಥ ಫೈಸಲ್ ಎಧಿ ತಿಳಿಸಿದ್ದಾರೆ.
ಕರಾಚಿ ಹಾಗೂ ಸಿಂಧ್ ಪ್ರಾಂತ್ಯದಲ್ಲಿ ಗಾಳಿಯ ವೇಗ ಸರಾಸರಿಗಿಂತ ತೀವ್ರವಾಗಿದೆ. ಸರ್ಕಾರ, ನಗರ ಸುತ್ತಮುತ್ತ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸಿದ್ದತೆಗಳನ್ನು ಹೆಚ್ಚಿಸಿದೆ. 77 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಧಿ ಸಂಸ್ಥೆ ತಿಳಿಸಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…