Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಕರ್ನಾಟಕ ಕಾಂಗ್ರೆಸ್‌ ಹೈಕಮಾಂಡ್‌ನ ಎಟಿಎಂ ಆಗಿದೆ ಎಂದ ಶೋಭಾ ಕರಂದ್ಲಾಜೆ

ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಹಣವನ್ನು ವರ್ಗಾವಣೆ ಮಾಡಿ ಎಲ್ಲಾ ಚುನಾವಣೆಗಳಲ್ಲೂ ಬಳಸಲಾಗಿದೆ. ಸಂವಿಧಾನ ಪುಷ್ತಕ ಹಿಡಿದು ಓಡಾಡುವ ಕಾಂಗ್ರೆಸ್‌ ನಾಯಕರು ಈ ರೀತಿ ಮಾಡಿದರೆ ಹೇಗೆ ಎಂದು ಕಿಡಿಕಾರಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿ ಹಾಗೂ ಜನತೆಯ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ. ಕಾಂಗ್ರೆಸ್‌ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ತೊಡಗಿದೆ. ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಹಗರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇನ್ನೂ ವಾಲ್ಮೀಕಿ ಹಗರಣ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಸೂಚನೆ ಮೇರೆಗೆ ಹಣ ವರ್ಗಾವಣೆಯಾಗಿದೆ. ಎಲ್ಲಾ ಹಗರಣಗಳ ತನಿಖೆ ಮುಗಿಯುವವರೆಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

 

Tags:
error: Content is protected !!