ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಹಣವನ್ನು ವರ್ಗಾವಣೆ ಮಾಡಿ ಎಲ್ಲಾ ಚುನಾವಣೆಗಳಲ್ಲೂ ಬಳಸಲಾಗಿದೆ. ಸಂವಿಧಾನ ಪುಷ್ತಕ ಹಿಡಿದು ಓಡಾಡುವ ಕಾಂಗ್ರೆಸ್ ನಾಯಕರು ಈ ರೀತಿ ಮಾಡಿದರೆ ಹೇಗೆ ಎಂದು ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿ ಹಾಗೂ ಜನತೆಯ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ತೊಡಗಿದೆ. ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಹಗರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಇನ್ನೂ ವಾಲ್ಮೀಕಿ ಹಗರಣ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಸೂಚನೆ ಮೇರೆಗೆ ಹಣ ವರ್ಗಾವಣೆಯಾಗಿದೆ. ಎಲ್ಲಾ ಹಗರಣಗಳ ತನಿಖೆ ಮುಗಿಯುವವರೆಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…