ಮಹಾರಾಷ್ಟ್ರ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌ ದಾಖಲಿಸಲು ಸಿದ್ಧತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ತುಮಕೂರು: ಮಹಾರಾಷ್ಟ್ರ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲವೆಂದು ಸುಳ್ಳು ಜಾಹೀರಾತು ನೀಡಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮಾನನಷ್ಟ ಮೊಕದ್ದಮೆ ಕೇಸ್‌ ದಾಖಲಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು (ನ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಸೂಚನೆ ನೀಡಿದ್ದು, ಆ ಪಕ್ಷದ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಈ ಆದೇಶದ ಮೇರೆಗೆ ಇನ್ನೊಮ್ಮೆ ಜಾಹೀರಾತನ್ನು ಪರಿಶೀಲಿಸಿ ಮಾನನಷ್ಟ ಮೊಕದ್ದಮೆ ಕೇಸ್‌ನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
ಮಹಾರಾಷ್ಟ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿಯು ಚುನಾವಣಾ ಪ್ರಚಾರದ ವೇಳೆ ಕರ್ನಾಟಕ ರಾಜ್ಯದ ಪಂಚ ಗ್ಯಾರಂಟಿಗಳನ್ನು ಸುಳ್ಳು ಗ್ಯಾರಂಟಿಗಳು ಎಂದು ಜಾಹೀರಾತು ನೀಡಿತ್ತು. ಅಲ್ಲದೇ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಜಾರಿಗೊಳಿಸಿಲ್ಲ. ಕೇವಲ ಕಾಂಗ್ರೆಸ್‌ ಸರ್ಕಾರ ಆ ರಾಜ್ಯದಲ್ಲಿ ಸುಳ್ಳು ಹೇಳುತ್ತಿದೆ ಎಂದು ಘೋಷಿಸಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರ ಜಾಹೀರಾತು ನೀಡಿ ರಾಜ್ಯ ಸರ್ಕಾರವನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾನೂನು ಕ್ರಮವನ್ನು ಜಾರಿಗೊಳಿಸಿದೆ.

andolana

Recent Posts

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 seconds ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

21 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

30 mins ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

48 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

1 hour ago