ದೇಶ- ವಿದೇಶ

ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ

ಹೊಸದಿಲ್ಲಿ : ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದಿಲ್ಲಿಯಲ್ಲಿರುವ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತ ಕಳ್ಳತನವನ್ನು ಮೊದಲು ಪಚ್ಚೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು ಎಂದು ವಿವರಿಸಿದರು.

“ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ” ಎಂದರು.

ಇದನ್ನೂ ಓದಿ:-ಜಾ.ದಳ ಬೆಳ್ಳಿಹಬ್ಬಕ್ಕೆ ಸಿದ್ಧತೆ : ನ.22 ರಂದು ರಾಷ್ಟ್ರೀಯ ಕಾರ್ಯಕಾರಿಣಿ, ಸಮಾವೇಶ

“ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ” ಎಂದರು.

“ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು” ಎಂದರು.

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?
ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು ತಿರುಗೇಟು ನೀಡಿದರು.

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ
“ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

15 mins ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

5 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

5 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

5 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

5 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

5 hours ago