ದೇಶ- ವಿದೇಶ

ಆಂಧ್ರಪ್ರದೇಶಕ್ಕೆ 9 ಆನೆಗಳನ್ನು ಕಳುಹಿಸಿಕೊಡಲಿದೆ ರಾಜ್ಯ ಸರ್ಕಾರ: ಯಾಕೆ ಗೊತ್ತಾ?

ಬೆಂಗಳೂರು: ನಲ್ಲಮಲ್ಲ ಮೀಸಲು ಅರಣ್ಯ ಪ್ರದೇಶದಲ್ಲಿನ ಕಾಡು ಪ್ರಾಣಿಗಳು, ಪರಿಸರ ಸಂರಕ್ಷಣೆಯ ಹಿತದೃಷ್ಠಿಯಿಂದಾಗಿ ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 9 ತರಬೇತಿ ಪಡೆದ ಆನೆಗಳನ್ನು ಕಳುಹಿಸಿಕೊಡಲು ರಾಜ್ಯ ಅರಣ್ಯ ಇಲಾಖೆ ಸಮ್ಮತಿಸಿದೆ.

ಆಂಧ್ರ ಅರಣ್ಯ ಇಲಾಖೆ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿನ ಬೆಲೆಬಾಳುವ ಅಪರೂಪದ ಪ್ರಭೇದಗಳು, ಮರಗಳು, ಪ್ರಾಣಿಗಳ ಸಂರಕ್ಷಣೆಗಾಗಿ ರೇಂಜರ್‌, ಮುಷ್ಕರ ಪಡೆಗಳು, ನೌಕರರು ಹಾಗೂ ಕಳ್ಳಬೇಟೆ ನಿಗ್ರಹ ದಳಗಳನ್ನು ಆಯೋಜಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ತರಬೇತಿ ಪಡೆದ 9 ಆನೆಗಳನ್ನು ಕಾರ್ಯಾಚರಣೆಗಾಗಿ ಬಳಸಲು ಅವರು ಮನವಿ ಮಾಡಿದ್ದಾರೆ.

ಕಳ್ಳ ಮಾರ್ಗಗಳ ಮೂಲಕ ಅಕ್ರಮ ಚಟುವಟಿಕೆಗಳನ್ನು ಮಾಡುತ್ತಿರುವ ಕಳ್ಳ ಸಾಗಾಣೆದಾರರು ಹಾಗೂ ಬೇಟೆಗಾರರನ್ನು ಸೆರೆಹಿಡಿಯಲು ಅಗತ್ಯ ನವೀನ ತಂತ್ರಜ್ಞಾನ ಬಳಸಿದ್ದರೂ ಸಹಾ ಬೇಟೆಗಾರರು ತಮ್ಮ ಕೆಲಸಗಳನ್ನು ಮುಂದುವರೆಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಂಪತ್ತನ್ನು ಸಂರಕ್ಷಿಸಲು ತರಬೇತಿ ಪಡೆದ ಆನೆಗಳನ್ನು ನಿಯೋಜಿಸಿ ಅಕ್ರಮ ತಡೆಗಟ್ಟಲು ಆಂಧ್ರಪ್ರದೇಶ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯದಿಂದ ತರಬೇತಿ ಪಡೆದ ಆನೆಗಳನ್ನು ಕಳುಹಿಸಿಕೊಡುವಂತೆ ಕೋರಿದ್ದರು.

ಇನ್ನು ಈ ಮನವಿಗೆ ಸ್ಪಂದಿಸಿದ ರಾಜ್ಯ ಅರಣ್ಯ ಇಲಾಖೆ ತರಬೇತಿ ಪಡೆದ 9 ಆನೆಗಳನ್ನು ಕಳುಹಿಸಿಕೊಡಲು ಸಮ್ಮತಿಸಿದ್ದಾರೆ. ಮತ್ತು ತರಬೇತಿ ಪಡೆದ ಆನೆಗಳನ್ನು ಮುನ್ನಡೆಸಲು ಮಾವುತ ಹಾಗೂ ಸಹಚರರಿಗೆ ತರಬೇತಿ ನೀಡುವ ಬಗ್ಗೆ ಹಾಗೂ ಆನೆಗಳ ಆಹಾರ ಪದ್ದತಿ, ಚಲನವಲನ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವ ಬಗ್ಗೆ ತರಬೇತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಪೆದ್ದ ದೋರ್ನಾಳ ಅರಣ್ಯ ವಲಯಾಧಿಕಾರಿ ವಿಶ್ವೇಶ್ವರ ರಾವ್‌ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

4 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

5 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

6 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

9 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

10 hours ago