Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಪಹಲ್ಗಾಮ್‌ ದಾಳಿ : ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು ನೀಡುತ್ತಿರುವ ಸಚಿವ ಸಂತೋಷ್‌ ಲಾಡ್‌

tourist attack 2025

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.

Tags:
error: Content is protected !!