tourist attack 2025
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್ ಲಾಡ್ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.
ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.
ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ.
ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…