by vijayendra
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಹಣ ಕ್ರೋಢೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕವು ಕಾಂಗ್ರೆಸ್ ಹೈಕಮಾಂಡಿಗೆ ಎಟಿಎಂ ಆಗಿ ಪರಿವರ್ತನೆಯಾಗಿದೆ. ರಾಜೀನಾಮೆ ಕೊಡದಂತೆ ಅಬಕಾರಿ ಸಚಿವರ ಮೇಲೂ ಒತ್ತಡ ಇದೆ. ಅವರು ರಾಜೀನಾಮೆ ಕೊಟ್ಟರೆ ಅದು ಯಾರ್ಯಾರ ಬುಡಕ್ಕೆ ಬರುತ್ತದೋ ಗೊತ್ತಿಲ್ಲ. ಇಂದು ಕೂಡ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ಮುಂದುವರಿಸುತ್ತೇವೆ ಎಂದು ಹೇಳಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…