ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: http://ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಸ್ಪಾಂಜ್ ಕಪ್ ಉಪಯೋಗಿಸಿ
ಘಟನೆ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್ ಅವರು, ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ. ಕಾಲ್ತುಳಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ನನ್ನನ್ನು ಟಾರ್ಗೆಟ್ ಮಾಡಿ. ಆದರೆ ಜನರನ್ನು ಟಾರ್ಗೆಟ್ ಮಾಡಬೇಡಿ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ಗೆ ನೇರ ಎಚ್ಚರಿಕೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಘಟನೆ ಯಾಕೆ ಸಂಭವಿಸಿತು ಎಂದು ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ಸತ್ಯ ಹೊರಬರಲಿದೆ. ಅತೀ ಶೀಘ್ರದಲ್ಲೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದರು.
ಇನ್ನು ಮುಖ್ಯಮಂತ್ರಿಗಳೇ ನಾನು ನಿಮ್ಮಲ್ಲಿ ಒಂದು ವಿನಂತಿ ಮಾಡುತ್ತೇನೆ. ನೀವು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಹುದು. ಆದರೆ ಕಾರ್ಯಕರ್ತರ ಮೇಲೆ ಅಲ್ಲ. ನನ್ನ ಟಿವಿಕೆ ಕಚೇರಿಗೆ ಬಂದು ಕ್ರಮ ಕೈಗೊಳ್ಳಬಹುದು. ದುರಂತದ ಬಗ್ಗೆ ಎಲ್ಲಾ ಸತ್ಯಗಳು ಶೀಘ್ರದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.





