ಕರೂರಿನಲ್ಲಿ ಕಾಲ್ತುಳಿತ ಪ್ರಕರಣ: ನಟ ವಿಜಯ್‌ ಮೊದಲ ಪ್ರತಿಕ್ರಿಯೆ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: http://ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಸ್ಪಾಂಜ್ ಕಪ್ ಉಪಯೋಗಿಸಿ

ಘಟನೆ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್‌ ಅವರು, ನನ್ನ ಜೀವನದಲ್ಲಿ ಇಂತಹ ನೋವಿನ ಸ್ಥಿತಿ ನೋಡಿರಲಿಲ್ಲ. ಕಾಲ್ತುಳಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ನನ್ನನ್ನು ನೋಡಿ ಅಭಿಮಾನಿಗಳು ರ್ಯಾಲಿಗೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ನನ್ನನ್ನು ಟಾರ್ಗೆಟ್‌ ಮಾಡಿ. ಆದರೆ ಜನರನ್ನು ಟಾರ್ಗೆಟ್‌ ಮಾಡಬೇಡಿ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ಗೆ ನೇರ ಎಚ್ಚರಿಕೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಘಟನೆ ಯಾಕೆ ಸಂಭವಿಸಿತು ಎಂದು ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ಸತ್ಯ ಹೊರಬರಲಿದೆ. ಅತೀ ಶೀಘ್ರದಲ್ಲೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದರು.

ಇನ್ನು ಮುಖ್ಯಮಂತ್ರಿಗಳೇ ನಾನು ನಿಮ್ಮಲ್ಲಿ ಒಂದು ವಿನಂತಿ ಮಾಡುತ್ತೇನೆ. ನೀವು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಹುದು. ಆದರೆ ಕಾರ್ಯಕರ್ತರ ಮೇಲೆ ಅಲ್ಲ. ನನ್ನ ಟಿವಿಕೆ ಕಚೇರಿಗೆ ಬಂದು ಕ್ರಮ ಕೈಗೊಳ್ಳಬಹುದು. ದುರಂತದ ಬಗ್ಗೆ ಎಲ್ಲಾ ಸತ್ಯಗಳು ಶೀಘ್ರದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

14 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

59 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago