ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರಿಗೆ ನಟ ವಿಜಯ್ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ.





