karuru tamil actor vijay
ಚೆನ್ನೈ: ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಒಂದು ತಿಂಗಳ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ನಾಳೆ ಸಂತ್ರಸ್ತರ ಕುಟುಂಬಗಳನ್ನು ಖಾಸಗಿಯಾಗಿ ಭೇಟಿ ಮಾಡಲಿದ್ದಾರೆ.
ಭೇಟಿಯ ಸಭೆಯು ಮಲ್ಲಪುರಂನ ಹೋಟೆಲ್‌ನಲ್ಲಿ ನಡೆಯಲಿದ್ದು, ಮಾಧ್ಯಮ ಸಿಬ್ಬಂದಿ ಅಥವಾ ಪಕ್ಷದ ಸದಸ್ಯರಿಗೆ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶವಿಲ್ಲ.
ಈ ಹಿಂದೆ ನಟ ವಿಜಯ್ ಅವರು ವಿಡಿಯೋ ಕರೆಗಳ ಮೂಲಕ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ವೈಯಕ್ತಿಕವಾಗಿ ತಲುಪಲು ಪ್ರಾರಂಭಿಸಿದ್ದರು.
ಇದನ್ನು ಓದಿ: ಮಾರುಕಟ್ಟೆಗಳಲ್ಲಿ ಸ್ಥಳೀಯ ವಸ್ತುಗಳ ಖರೀದಿ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿ ಸಂತಸ
ಕಳೆದ ಸೆಪ್ಟೆಂಬರ್.27ರಂದು ವಿಜಯ್ ರ್ಯಾಲಿಯ ಸಮಯದಲ್ಲಿ ಸಂಭವಿಸಿದ ದುರಂತವು 41 ಜನರನ್ನು ಬಲಿ ತೆಗೆದುಕೊಂಡಿತ್ತು. ಘಟನೆಯಲ್ಲಿ ನೂರನ್ನೂ ಹೆಚ್ಚು ಜನರು ಗಾಯಗೊಂಡಿದ್ದರು.
ಬಳಿಕ ಸಂತ್ರಸ್ತರ ಕುಟುಂಬದವರೊಂದಿಗೆ ವಿಜಯ್ ಅವರ ಪ್ರತಿಯೊಂದು ಕರೆಗಳು ಸುಮಾರು 20 ನಿಮಿಷಗಳ ಕಾಲ ನಡೆದವು. ಈ ಸಮಯದಲ್ಲಿ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದರು.
ಕುಟುಂಬಗಳಿಗೆ ಸಹಾಯದ ಭರವಸೆ ಕೂಡ ನೀಡಿದ್ದರು. ಘಟನೆಯ ಒಂದು ದಿನದ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ಪ್ರತಿ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…