Mysore
32
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ.

ಕಳೆದ ವರ್ಷದ ನಡೆದ ಕರೂರ್‌ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

2025ರ ಸೆಪ್ಟೆಂಬರ್ 27ರಂದು ವಿಜಯ್‌ ಅವರ ಪಕ್ಷದ ರ್ಯಾಲಿ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ ಸುಮಾರು 41 ಜನರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್‌ ಅವರು ಈಗಾಗಲೇ ಜನವರಿ.12 ಮತ್ತು ಜನವರಿ.19ರಂದು ಸಿಬಿಐ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದರು.

ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Tags:
error: Content is protected !!