ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್ ನಡೆದಿದ್ದು, ಉಗ್ರರೊಂದಿಗಿನ ಈ ಕದನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ವಿರುದ್ಧದ ಕಾರ್ಯಚರಣೆ ಈಗಲೂ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ತಿಳಿಸಿದ್ದಾರೆ.
ಶನಿವಾರ(ಜು.6) ಕುಲ್ಗಾಮ್ ಜಿಲ್ಲೆಯ ಎರಡು ಕಡೆಗಳಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭಾರಿ ಪ್ರಮಾಣದ ಗುಂಡಿನ ಚಕಮಕಿ ಆರಂಭಗೊಂಡಿತ್ತು. ಇಲ್ಲಿಯವರೆಗು ನಡೆದು ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದು, ಅವರ ದೇಹಗಳನ್ನು ಹೊರತೆಗೆಯಲಾಗಿದೆ.