ದೇಶ- ವಿದೇಶ

ಕಾಶ್ಮೀರ: 6 ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫ್ರಿಸಲ್‌ ಚಿಂಗಮ್‌ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್‌ ನಡೆದಿದ್ದು, ಉಗ್ರರೊಂದಿಗಿನ ಈ ಕದನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ವಿರುದ್ಧದ ಕಾರ್ಯಚರಣೆ ಈಗಲೂ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ತಿಳಿಸಿದ್ದಾರೆ.

ಶನಿವಾರ(ಜು.6) ಕುಲ್ಗಾಮ್‌ ಜಿಲ್ಲೆಯ ಎರಡು ಕಡೆಗಳಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭಾರಿ ಪ್ರಮಾಣದ ಗುಂಡಿನ ಚಕಮಕಿ ಆರಂಭಗೊಂಡಿತ್ತು. ಇಲ್ಲಿಯವರೆಗು ನಡೆದು ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದು, ಅವರ ದೇಹಗಳನ್ನು ಹೊರತೆಗೆಯಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

4 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

5 hours ago