ಶ್ರೀನಗರ : ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ದುರಂತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ 15 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 20 ಜನ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಸಾಗಿಸುವ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…