KRS Dam
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಶಿಫಾರಸು ಮಾಡಿತ್ತು. 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಸೂಚಿಸಲಾಗಿತ್ತು.
ಈ ಶಿಫಾರಸನ್ನು ಎತ್ತಿಹಿಡಿದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿತ್ತು.
ಆದರೆ, ರಾಜ್ಯದ ಜಲಾಶಯಗಳ ನೀರಿನ ಸ್ಥಿತಿ ಹಾಗೂ ರೈತರ ಹಿತದೃಷ್ಟಿಯಿಂದ, 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸಬೇಕು ಎಂದು ಕರ್ನಾಟಕ ಸರ್ಕಾರ ಇದೀಗ ಮೇಲ್ಮನವಿ ಸಲ್ಲಿಸಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕೂಡಲೇ 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
ಕರ್ನಾಟಕದ ಈ ಮೇಲ್ಮನವಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಯಾವ ನಿರ್ಧಾರ ಹೊರಬೀಳಲಿದೆ ಎಂಬುದು ಇದೀಗ ಭಾರೀ ಕುತೂಹಲ ಮೂಡಿಸಿದೆ.
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…