ದೇಶ- ವಿದೇಶ

ತಂದೆ ಕೆಸಿಆರ್‌ಗೆ ಸೆಡ್ಡು: ಹೊಸ ಟಿಆರ್‌ಎಸ್‌ ಪಕ್ಷ ಸ್ಥಾಪಿಸಿದ ಕವಿತಾ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.

ಕವಿತಾ ಅವರು ತಮ್ಮ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ ಎಂದು ಹೆಸರಿಸಿದ್ದಾರೆ. ಇದು ಈ ಹಿಂದೆ ಅವರ ತಂದೆ ಕೆಸಿಆರ್ ಅವರು ಬಳಸುತ್ತಿದ್ದ ‘ತೆಲಂಗಾಣ ರಾಷ್ಟ್ರ ಸಮಿತಿ’ ಹೆಸರನ್ನು ನೆನಪಿಸುವಂತಿದ್ದು, ತೆಲಂಗಾಣದ ಮೂಲ ಅಸ್ಮಿತೆಯನ್ನು ಮರಳಿ ಪಡೆಯುವ ಸಂಕೇತವಾಗಿ ಬಳಸಲಾಗಿದೆ.

ಕವಿತಾ ಅವರು ಸೆಪ್ಟೆಂಬರ್ 2025ರಲ್ಲಿ ಭಾರತ್ ರಾಷ್ಟ್ರ ಸಮಿತಿಯಿಂದ ಹೊರಬಂದಿದ್ದರು. ಆಂತರಿಕ ಭಿನ್ನಮತ ಮತ್ತು ಅವರ ಸಹೋದರ ಕೆ.ಟಿ. ರಾಮರಾವ್ ಅವರೊಂದಿಗಿನ ವೈಮನಸ್ಸಿನಿಂದಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ನಂತರ ಅವರು ಎಂಎಲ್‍ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಇಂದು ಹೈದರಾಬಾದ್‍ನ ಮುನೀರ್‍ಬಾದ್‍ನಲ್ಲಿ ನಡೆದ ಸಮಾವೇಶದಲ್ಲಿ ಪಕ್ಷದ ಧ್ವಜ ಮತ್ತು ಸಿದ್ಧಾಂತಗಳನ್ನು ಅನಾವರಣಗೊಳಿಸಲಾಗಿದೆ. ಈ ಹೊಸ ಪಕ್ಷವು ನೇರವಾಗಿ ಬಿಆರ್‍ಎಸ್ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಗಳಿಗೆ ಸವಾಲು ಒಡ್ಡಲಿದೆ.

ಸುದ್ದಿಗೋಷ್ಠಿಯಲ್ಲಿ ಹೊಸ ಪಕ್ಷದ ರಚನೆಯ ಕುರಿತು ಮಾತನಾಡಿದ ಕವಿತಾ, ತೆಲಂಗಾಣ ರಾಜ್ಯವಾಗಿ 12 ವರ್ಷಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ ಸಾರ್ವಜನಿಕರ ನಿರೀಕ್ಷೆಗಳು ಇನ್ನೂ ಈಡೇರಿಲ್ಲ. 12 ವರ್ಷಗಳ ನಂತರವೂ, ತೆಲಂಗಾಣ ಚಳವಳಿಯ ಅಡಿಪಾಯವಾಗಿದ್ದ ನೀಲು, ನಿಧಿ, ನಿಯಮಕ್ಲು (ನೀರು, ಹಣ ಮತ್ತು ಉದ್ಯೋಗ) ಗಳನ್ನು ಕೊಡುವಲ್ಲಿ ಆಡಳಿತ ನಡೆಸಿದ ಪಕ್ಷಗಳು ವಿಫಲವಾಗಿದೆ ಎಂದು ಕವಿತಾ ಅವರು ಆರೋಪ ಮಾಡಿದರು.

ತಮ್ಮ ಪಕ್ಷವು ತೆಲಂಗಾಣದ ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ವೇದಿಕೆಯಾಗಲಿದೆ. ಮುಖ್ಯವಾಗಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಹಿತರಕ್ಷಣೆಗಾಗಿ ಶ್ರಮಿಸಲಿದೆ ಎಂದು ಕವಿತಾ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago