ದೇಶ- ವಿದೇಶ

ಕೇದಾರನಾಥ ದೇವಾಲಯ ಬಂದ್

ರುದ್ರಪ್ರಯಾಗ : ಉತ್ತರಾಖಂಡದ ಗರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಗುರುವಾರದಿಂದ ಮುಚ್ಚಲಾಗಿದೆ.

ಚಳಿಗಾಲದ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ, ಕೇದಾರನಾಥನನ್ನು ಅವರ ಚಳಿಗಾಲದ ನಿವಾಸವಾದ ಉಖಿಮಠದಲ್ಲಿ ಪೂಜಿಸಲಾಗುವುದು. ವಿಶೇಷ ಪೂಜೆಯ ನಂತರ, ಬೆಳಿಗ್ಗೆ ೮.೩೦ ಕ್ಕೆ ಬಾಬಾ ಕೇದಾರದ ಬಾಗಿಲುಗಳನ್ನು ಮುಚ್ಚಲಾಯಿತು ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಮೂಲಗಳು ತಿಳಿಸಿವೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೂರಾರು ಮಂದಿಯೊಂದಿಗೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿಗಳು, ದೇವಾಲಯ ಸಮಿತಿ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಯಾತ್ರಿಕರು, ಪುರೋಹಿತರು ಉಪಸ್ಥಿತರಿದ್ದರು. ಬಾಗಿಲು ಮುಚ್ಚಿದ ನಂತರ, ಕೇದಾರನಾಥದ ಪಲ್ಲಕ್ಕಿಯು ಉಖಿಮಠದ ಓಂಕಾರೇಶ್ವರ ದೇವಾಲಯಕ್ಕೆ ವಿಧ್ಯುಕ್ತವಾಗಿ ಹೊರಟಿತು.

ಇದನ್ನು ಓದಿ: ಉತ್ತರಾಖಂಡದಲ್ಲಿ ಮಳೆಗೆ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ:

ಗುರುವಾಋ ರಾತ್ರಿ ರಾಂಪುರದಲ್ಲಿಯೇ ಉಳಿದು ಶುಕ್ರವಾರ ಗುಪ್ತಕಾಶಿಗೆ ಪಲ್ಲಕ್ಕಿ ಆಗಮಿಸಲಿದ್ದು, ಅಲ್ಲಿಂದ ಅಕ್ಟೋಬರ್ ೨೫ರಂದು ತನ್ನ ಚಳಿಗಾಲದ ಪೀಠವಾದ ಓಂಕಾರೇಶ್ವರ ದೇವಸ್ಥಾನಕ್ಕೆ ತೆರಳಲಿದೆ. ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೇದಾರನಾಥ ದೇವಾಲಯದ ಬಾಗಿಲುಗಳು ಮತ್ತೆ ತೆರೆಯಲಿವೆ.

ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದಿನಾಂಕ ಮತ್ತು ಸಮಯವನ್ನು ನಿರ್ಧರಿಸಲಾಗುವುದು. ರಾಜ್ಯ ಸರ್ಕಾರದ ಯೋಜಿತ ಪ್ರಯತ್ನಗಳಿಂದಾಗಿ ಈ ಬಾರಿ ಚಾರ್‌ಧಾಮ್ ಯಾತ್ರೆ ಯಶಸ್ವಿ ಮತ್ತು ಸುಗಮವಾಗಿ ಸಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

11 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

13 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

14 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

15 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 hours ago