ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಒಂದು ವಾರದಿಂದ ಇಡಿ ಕಸ್ಟಡಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಮತ್ತೆ 7 ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಕೋರಿತ್ತು.
ಇದಕ್ಕೆ ಸ್ಪಂದಿಸಿರುವ ನ್ಯಾಯಾಲಯ 4 ದಿನಗಳ ಕಾಲ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ವಿಸ್ತರಿಸಿ ಆದೇಶವನ್ನು ಹೊರಡಿಸಿದೆ.





