ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೆಸರು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್ ಬಗ್ಗೆ ನಮಗೆ ಅನುಕಂಪ ಇಲ್ಲ. ಆದರೆ ರಾಜ್ಯದ ಜನರ ಬಗ್ಗೆ ಅನುಕಂಪ ಇದೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಸೊಕ್ಕು ಮುರಿಯಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅವರನ್ನು ಕಟ್ಟಿಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಡಿಕೆಶಿ ವಿರುದ್ಧ ಅವರ ಪಕ್ಷದೊಳಗೆ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಲು ಒತ್ತಡ ಹಾಕಲಾಗುತ್ತಿದೆ. ನನಗೆ ಇರುವ ಮಾಹಿತಿ ಪ್ರಕಾರ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮನವೊಲಿಸಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುತ್ತಾರೆ ಎಂದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…