ನೈರೋಬಿ : ಕೀನ್ಯಾ ಸಂಸತ್ ಭವನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ನೂತನ ತೆರಿಗೆ ನೀತಿ ಮಸೂದೆ ವಿರುದ್ಧ ಕೀನ್ಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು ಇದರ ಬೆನ್ನಲ್ಲೆ ಇಂದು ನೂತನ ಮಸೂದೆಗೆ ಅಂಗೀಕಾರ ದೊರೆತಿದೆ. ವಿಚಾರ ತಿಳಿಯುತ್ತಿದ್ದಂತೆ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಮುತ್ತಿಗೆ ಹಾಕುವುದಲ್ಲದೇ ಸಂಸತ್ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಭದ್ರತಾಪಡೆ ಗಫಲಿಬಾರ್ ನಡೆಸಿದ್ದು 10ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಸಂಸತ್ ಭವನ ಬೆಂಕಿ ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.