ದೇಶ- ವಿದೇಶ

ಕೀನ್ಯಾ ಸಂಸತ್‌ ಭವನಕ್ಕೆ ಬೆಂಕಿ

ನೈರೋಬಿ : ಕೀನ್ಯಾ ಸಂಸತ್‌ ಭವನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ನೂತನ ತೆರಿಗೆ ನೀತಿ ಮಸೂದೆ ವಿರುದ್ಧ ಕೀನ್ಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು ಇದರ ಬೆನ್ನಲ್ಲೆ ಇಂದು ನೂತನ ಮಸೂದೆಗೆ ಅಂಗೀಕಾರ ದೊರೆತಿದೆ. ವಿಚಾರ ತಿಳಿಯುತ್ತಿದ್ದಂತೆ ಪ್ರತಿಭಟನಾಕಾರರು ಸಂಸತ್‌ ಭವನಕ್ಕೆ ಮುತ್ತಿಗೆ ಹಾಕುವುದಲ್ಲದೇ ಸಂಸತ್‌ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ.

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಭದ್ರತಾಪಡೆ ಗಫಲಿಬಾರ್‌ ನಡೆಸಿದ್ದು 10ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಸಂಸತ್‌ ಭವನ ಬೆಂಕಿ ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

13 mins ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

22 mins ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

30 mins ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

34 mins ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

2 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

3 hours ago