ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಗೆ ಉಸ್ತುವಾರಿ ಮತ್ತು ಸಹ ಉಸ್ತುವಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಏಪ್ರಿಲ್‌ನಲ್ಲಿ ಕೇರಳ ರಾಜ್ಯದ 140 ಸದಸ್ಯ ಬಲದ ವಿಧಾನಸಭೆ ಚುನಾವಣೆ ನಡೆಯಲಿದೆ. ತಿರುವನಂತರಪುರಂ ಪಾಲಿಕೆ ಚುನಾವಣೆ ಗೆದ್ದು ಉತ್ಸಾಹದಲ್ಲಿರುವ ಬಿಜೆಪಿಯು ಕೇರಳ ಚುನಾವಣೆಯಲ್ಲಿಯೂ ಹೆಚ್ಚು ಸೀಟು ಗೆಲ್ಲುವ ಲೆಕ್ಕಾಚಾರದಲ್ಲಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರು ಕೇರಳ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದಾರೆ.
ಇನ್ನು ಬೆಂಗಳೂರು ಉತ್ತರ ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೇರಳ ಚುನಾವಣೆಯ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.




