ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್‌ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು.
ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯ್, ವಿಶ್ವವಿದ್ಯಾಲಯಗಳಲ್ಲಿ ಆರಂಭಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೇರಳದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಪಡೆಯಲಿದ್ದಾರೆ ಎಂದರು.
ಕಾಲೇಜು ಕ್ಯಾಂಪಸ್‌ಗಳ ಕಲಿಕೆಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಬದಲಾಗಿದೆ. ಆನ್‌ಲೈನ್ ವೇದಿಕೆಯಲ್ಲಿ ಕಲಿಕೆ, ಪ್ರಾಯೋಗಿಕ ಕಲಿಕೆ ಮತ್ತು ಸ್ಥಳಗಳ ಭೇಟಿಗೆ ಸಮನಾದ ಪ್ರಾಮುಖ್ಯತೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ, ಉದ್ಯೋಗಕ್ಕೆ ಅಗತ್ಯವಾದ ತರಬೇತಿ, ಜ್ಞಾನ ವೃದ್ಧಿ ಮತ್ತು ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ದೊರಯಲಿದೆ ಎಂದು ಪಿಣರಾಯ್ ಹೇಳಿದರು.
ಶಿಕ್ಷಣದ ಜತೆಗೆ ಮೂಲಭೂತ ಸೌಕರ್ಯಗ ಅಭಿವೃದ್ಧಿಗೂ ಇದೇ ಸಮನಾದ ಮಹತ್ವವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.





