ತಿರುವನಂತಪುರಂ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ಕೂಡ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಹಾರದ ಬಳಿಕ ಕೇರಳ ಸೇರಿದಂತೆ ದೇಶದ ಇರತೆ ರಾಜ್ಯಗಳಲ್ಲಿ ಎಸ್‌ಐಆರ್ ಕೈಗೊಳ್ಳುವ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ಎಸ್‌ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ತೀವ್ರ ಅಪಾಯವನ್ನು ಉಂಟು ಮಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತರಾತುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವ ಅಗತ್ಯತೆ ಏನಿದೆ? ಎಂದು ಪ್ರಶ್ನಿಸಿದ ಅವರು ಎಸ್‌ಐಆರ್ ಪ್ರಕ್ರಿಯೆಯನ್ನು ಜಾರಿಗೆ ತರಲು ಮಾಡುತ್ತಿರುವ ಪ್ರಯತ್ನಗಳನ್ನು ಚುನಾವಣಾ ಆಯೋಗದ ಸಹಜ ಪ್ರಕ್ರಿಯೆ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳಿಂದ ಚುನಾವಣಾ ಆಯೋಗದ ಉದ್ದೇಶದ ಕುರಿತು ತೀವ್ರ ಅನುಮಾನ ಮೂಡಿದೆ. ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ನಂಬಿಕೆಗೆ ಧಕ್ಕೆ ಉಂಟಾಗಲಿದೆ ಎಂದು ಹೇಳಿದ್ದಾರೆ.
ದೀರ್ಘಕಾಲದ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಜಾರಿಗೆ ತರುವ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಬುಡಮೇಲು, ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕೆ ಮಾಡಿದ್ದಾರೆ.
ಇನ್ನು ಕಳೆದ ಸೆಪ್ಟೆಂಬರ್ ತಿಂಗಳಿನಲ್ಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಕೈಗೊಳ್ಳುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಎಸ್‌ಐಆರ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಟವು, ಸಿಎಂ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತ್ತು.
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…