ದೇಶ- ವಿದೇಶ

ಎಸ್‌ಐಆರ್ ಜಾರಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಕ್ರೋಶ

ತಿರುವನಂತಪುರಂ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ಕೂಡ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರದ ಬಳಿಕ ಕೇರಳ ಸೇರಿದಂತೆ ದೇಶದ ಇರತೆ ರಾಜ್ಯಗಳಲ್ಲಿ ಎಸ್‌ಐಆರ್‌ ಕೈಗೊಳ್ಳುವ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು, ಎಸ್‌ಐಆರ್‌ ಜಾರಿ ಪ್ರಜಾಪ್ರಭುತ್ವಕ್ಕೆ ತೀವ್ರ ಅಪಾಯವನ್ನು ಉಂಟು ಮಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತರಾತುರಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಸುವ ಅಗತ್ಯತೆ ಏನಿದೆ? ಎಂದು ಪ್ರಶ್ನಿಸಿದ ಅವರು ಎಸ್‌ಐಆರ್‌ ಪ್ರಕ್ರಿಯೆಯನ್ನು ಜಾರಿಗೆ ತರಲು ಮಾಡುತ್ತಿರುವ ಪ್ರಯತ್ನಗಳನ್ನು ಚುನಾವಣಾ ಆಯೋಗದ ಸಹಜ ಪ್ರಕ್ರಿಯೆ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳಿಂದ ಚುನಾವಣಾ ಆಯೋಗದ ಉದ್ದೇಶದ ಕುರಿತು ತೀವ್ರ ಅನುಮಾನ ಮೂಡಿದೆ. ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ನಂಬಿಕೆಗೆ ಧಕ್ಕೆ ಉಂಟಾಗಲಿದೆ ಎಂದು ಹೇಳಿದ್ದಾರೆ.

ದೀರ್ಘಕಾಲದ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್‌ಐಆರ್‌ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಜಾರಿಗೆ ತರುವ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಬುಡಮೇಲು, ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಇನ್ನು ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಕೈಗೊಳ್ಳುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಎಸ್‌ಐಆರ್‌ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಟವು, ಸಿಎಂ ಪಿಣರಾಯಿ ವಿಜಯನ್‌ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತ್ತು.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

3 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

4 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

4 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

4 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

4 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

9 hours ago