ಕೊಚ್ಚಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಸಿಂಗ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರೇ ಕೇರಳ ಸಿಎಂ ಪಿಣರಾಜಯಿ ವಿಜಯನ್ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಇಂದು(ಡಿಸೆಂಬರ್.28) ಮಾಧ್ಯಮಗಳೊಂದಿಗೆ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಇಡೀ ದೇಶವೇ ಶೋಕಾಚರಣೆಯಲ್ಲಿ ಆಚರಿಸುತ್ತಿದ್ದಾರೆ. ಆದರೆ ಈ ರಾಜ್ಯದ ಮುಖ್ಯಮಂತ್ರಿ ಮಾತ್ರ ಕೊಚ್ಚಿಯ ವಿಮಾನ ನಿಲ್ದಾಣದಲ್ಲಿರುವ ತಾಜ್ ಕೊಚ್ಚಿನ್ ಪಂಚತಾರಾ ಹೋಟೆಲ್ ಅನ್ನು ಉದ್ಘಾಟಿಸುವ ಮೂಲಕ ಸಿಂಗ್ ಅವರಿಗೆ ಅಗೌರವ ಹಾಗೂ ಅನುಚಿತ ನಡೆ ತೋರಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ರಾಜ್ಯ ಸಿಎಂ ವಿಜಯನ್ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬಾರದಿತ್ತು. ಅಲ್ಲದೇ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಅವರಿಗೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿದ್ದೇವು. ಆದರೆ ಯಾರ ಮಾತೂ ಕೇಳದೆ ಉದ್ಘಾಟಣಾ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಿಂಗ್ ಅವರಿಗೆ ಅಗೌರವ ತೋರಿದಂತೆ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.