ಕೇರಳ: ಇಲ್ಲಿನ ಜವಾಹರ್‌ಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದ ವಿಐಪಿ ಗ್ಯಾಲರಿಯಿಂದ 20 ಅಡಿ ಕೆಳಗೆ ಬಿದ್ದು ಕೇರಳದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಸ್ಥಿತಿ ಗಂಭೀರವಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಉಮಾ ಥಾಮಸ್ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವೈದ್ಯರ ಮಾಹಿತಿ ಪ್ರಕಾರ ಘಟನೆಯಲ್ಲಿ ಶಾಸಕಿ ಉಮಾ ಥಾಮಸ್ ಅವರ ಮೆದುಳು, ಶ್ವಾಸಕೋಶಗಳು ಹಾಗೂ ಬೆನ್ನುಮೂಳೆಗೆ ತೀವ್ರ ಗಾಯವಾಗಿದೆ. ಅವರ ಪಕ್ಕೆಲುಬು ಮುರಿದುಹೋದ ಪರಿಣಾಮ ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯ ವಿವರ: ಭಾನುವಾರ ಕಲೂರ್ ಕ್ರೀಡಾಂಗಣದಲ್ಲಿ ನಟಿ ದಿವ್ಯಾ ಉನ್ನಿ ನೇತೃತ್ವದ 12,000 ನೃತ್ಯಗಾರರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ತೃಕ್ಕಾಕರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಥಾಮಸ್ ಅವರು ಕಾಲು ಜಾರಿ 20 ಅಡಿ ಕೆಳಗೆ ಬಿದ್ದಿದ್ದು, ಘಟನೆ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಉಮಾ ಥಾಮಸ್ ಅವರು ಕೆಳಗೆ ಬಿದ್ದಾಗ ಅವರ ಮೇಲೆ ಪೈಪ್ ಕೂಡ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…