ನವದೆಹಲಿ: ಖಾದಿ ಉತ್ಪನ್ನಗಳ ಬಳಕೆಗೆ ಸದಾ ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಆದಾಯ ಮೊದಲ ಬಾರಿಗೆ 1.5ಲಕ್ಷ ಕೋಟಿ ದಾಟಿದೆ.
ಖಾದಿ ಉತ್ಪನ್ನಗಳ ಬಳಕೆಗೆ ಸದಾ ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಆದಾಯ ಮೊದಲ ಬಾರಿಗೆ ರೂ 1.5 ಲಕ್ಷ ಕೋಟಿ ದಾಟಿದೆ. ಜೊತೆಗೆ 10 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಅಂಕಿ ಅಂಶಗಳು ಹೇಳಿವೆ.
ನರೇಂದ್ರ ಮೋದಿ ಅಧಿಕಾರಕ್ಕೆ ಬಂದ 2013-14ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ವಾರ್ಷಿಕ ಆದಾಯ 31,154 ಕೋಟಿ ರೂ ನಷ್ಟಿತ್ತು. 2023-24ರಲ್ಲಿ ಈ ಆದಾಯವು 1.55 ಲಕ್ಷ ಕೋಟಿ ರೂ ತಲುಪಿದೆ. ಈ ಅವಧಿಯಲ್ಲಿ ಉತ್ಪಾದನೆ ಶೇ.315ರಷ್ಟು ಮತ್ತು ಮಾರಾಟ ಶೇ.400ರಷ್ಟು ಮಾರಾಟ ಹೆಚ್ಚಳವಾಗಿದೆ ಎಂದು ಮಂಡಳಿ ಅಧ್ಯಕ್ಷ ಮನೋಜ್ ಕುಮಾರ್ ಮಾಹಿತಿ ನೀಡಿದ್ದಾರೆ.
ಖಾದಿ ಉತ್ಪನ್ನದಿಂದ ದೇಶದ ಆದಾಯ ಕೂಡ ಹೆಚ್ಚಾಗುತ್ತಿದ್ದು, ನಿರುದ್ಯೋಗಿಗಳಿಗೆ ಉದ್ಯೋಗ ದೊರಕುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಖಾದಿ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ಕೊಡುತ್ತಿದ್ದು, ಆದಾಯ ಏರಿಕೆಗೆ ಇದೇ ಮೂಲ ಕಾರಣ ಎನ್ನಲಾಗುತ್ತಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…