ಸಿಯೋಲ್-ಉತ್ತರ ಕೊರಿಯಾದ ಸರ್ವಾಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ.
ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ.
ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ.
ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ ತಂದೆಯೊಂದಿಗೆ ಕೈ ಹಿಡಿದುಕೊಂಡು ಬೃಹತ್ ಕ್ಷಿಪಣಿಯನ್ನು ನೋಡುತ್ತಿರುವ ಫೊಟೋಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕಿಮ್‍ಗೆ ಮೂವರು ಮಕ್ಕಳು, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನಿದ್ದಾನೆ ಎಂದು ಜನ ನಂಬಿದ್ದಾರೆ. ಆದರೆ, ಇದುವರೆಗೂ ಕಿಮ್ ಮಕ್ಕಳು ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
2013 ರಲ್ಲಿ ನಿವೃತ್ತ ಅಮೇರಿಕನ್ ಬಾಸ್ಕೆಟ್‍ಬಾಲ್ ತಾರೆ ಡೆನ್ನಿಸ್ ರಾಡ್‍ಮನ್ ಅವರು ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಿಮ್‍ಗೆ ಜು ಏ ಎಂಬ ಮಗು ಮಗಳು ಇದ್ದಾರೆ ಅವರ ಕುಟುಂಬದೊಂದಿಗೆ ನಾನು ಸಮಯ ಕಳೆದಿದ್ದೆ ಎಂದಿದ್ದರು.
ಜು ಎಗೆ ಸುಮಾರು 12-13 ವರ್ಷ ವಯಸ್ಸಾಗಿರುತ್ತದೆ ಎಂದು ಅಂದಾಜಿಸಲಾಗಿದೆ, ಅಂದರೆ ಸುಮಾರು ನಾಲ್ಕರಿಂದ ಐದು ವರ್ಷಗಳಲ್ಲಿ ಅವರು ವಿಶ್ವವಿದ್ಯಾನಿಲಯಕ್ಕೆ ಹಾಜರಾಗಲು ಅಥವಾ ಮಿಲಿಟರಿ ಸೇವೆಗೆ ಸೇರಲು ಇಲ್ಲವೆ ಕಿಮ್ ಉತ್ತರಾಕಾರಿಯಾಗಲು ಆಕೆ ತಯಾರಿ ನಡೆಸುತ್ತಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಿಮ್ ಮಗಳು ಮಾತ್ರವಲ್ಲದೆ ಆತನ ಪತ್ನಿ ರಿ ಸೋಲ್ ಜು ಕೂಡ ಕಾಣಿಸಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಮಾತ್ರ ಸುಳ್ಳಲ್ಲ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…