ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್‌ನ ಸಂಸ್ಥಾಪಕ ರಾಕೇಶ್ ಜುಂಜುನ್‌ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು.
ಇಂಡಿಯಾಸ್ ವಾರೆನ್ ಬಫೆಟ್ ಎಂದು ಕರೆಯಲ್ಪಟ್ಟ ಜುಂಜುನ್‌ವಾಲಾ ಅವರ ಉತ್ಸಾಹ ಮತ್ತು ಅದಮ್ಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದರು. ಸದ್ಯ ಅವರ ಸಕಾರಾತ್ಮಕತೆಯನ್ನು ಬಿಂಬಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಜುಂಜುನ್‌ವಾಲಾ ಅವರು ಮಧುಮೇಹದಿಂದ ಬಳಲುತ್ತಿದ್ದಾಗ ಗಾಲಿಕುರ್ಚಿಯಲ್ಲಿ ಕುಳಿತಿರುವುದನ್ನು ಕಾಣಬಹುದು.
ಜೀವನದಲ್ಲಿ ಅವರಿಗೆ ಇದ್ದ ಉತ್ಸಾಹವನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದು. ಅದೆಷ್ಟೋ ಜನರಿಗೆ ಸ್ಪೂರ್ತಿಯಾಗಿದ್ದರು. ತಮ್ಮ ಮಕ್ಕಳಿಗೆ 25 ವರ್ಷ ಆಗುವ ತನಕ ಜೀವಿತವಾಗಿರಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಇಂದು ಅವರು ಎಲ್ಲರನ್ನು ಬಿಟ್ಟು ಅಗಲಿರುವುದು ಎಲ್ಲರಿಗು ಬೇಸರ ಮೂಡಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…