Mysore
33
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಸುಕಾಂತ ಮಜುಂದಾರ್‌ ಸಮ್ಮುಖದಲ್ಲಿ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್‌ ನವಿನ್‌ ಅವರನ್ನು ಪೇಸ್‌ ಭೇಟಿಯಾಗಿದ್ದರು.

ಪೇಸ್‌ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಮಾತನಾಡಿ ಬಿಜೆಪಿ ಕುಟುಂಬಕ್ಕೆ ಲಿಯಾಂಡರ್‌ ಪೇಸ್‌ ಅವರ ಇಂದಿನ ಐತಿಹಾಸಿಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ 12 ವರ್ಷಗಳಿಂದ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರತಿಪಾದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Tags:
error: Content is protected !!