ಗುವಾಹಟಿ: ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್ ರೈಲೊಂದು ಹಳಿತಪ್ಪಿದ ಪರಿಣಾಮ ಕೆಲ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಅಸ್ಸಾಂನ ಡಿಗಾರು ರೈಲು ನಿಲ್ದಾಣದ ಬಳಿ ನಡೆದಿದೆ.
ಕೋಲ್ಕತ್ತಾದಿಂದ ಮಿಜೋರಾಂಗೆ ತೆರಳುತ್ತಿದ್ದ ರೈಲು ಇದಾಗಿದ್ದು, ಎಂಜಿನ್ ಹಾಗೂ ಐದು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತೊಂದು ರೈಲಿಗೆ ದಾರಿ ಮಾಡಿಕೊಡುವ ವೇಳೆ ಘಟನೆ ಸಂಭವಿಸಿದ್ದು, ಲೋಕೋ ಪೈಲಟ್‌ಗೆ ವೇಗ ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯಕ್ಕೆ ಯಾವುದೇ ಪ್ರಾಣಹಾನಿ ಇಲ್ಲ; ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




