ದೇಶ- ವಿದೇಶ

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಲಿದೆ: ವಿ.ಸೋಮಣ್ಣ

ಬೆಂಗಳೂರು: ರಾಜ್ಯದಲ್ಲಿ ಸುಮಾರು 742 ಕಿ.ಮೀ. ರಷ್ಟು ವ್ಯಾಪ್ತಿಯನ್ನು ಹೊಂದಿರುವ ಕೊಂಕಣ ರೈಲ್ವೆ ಕುರಿತು ಕೇಂದ್ರ ರೈಲ್ವೆ ಖಾತೆಯ ಸಚಿವ ವಿ.ಸೋಮಣ್ಣ ಪ್ರಮುಖ ಮಾಹಿತಿ ನೀಡಿದ್ದಾರೆ. ಹೌದು ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಲಿದೆ ಎಂಬುದನ್ನು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಪುಣೆ-ಹುಬ್ಬಳ್ಳಿ ನಡುವೆ ವಂದೇ ಭಾರತ್‌ ರೈಲ್ವೆಗೆ ಚಾಲನೆ ನೀಡಿದ್ದು, ಆ ರೈಲು ಬೆಳಗಾವಿಗೆ ಬಂದ ಸಂದರ್ಭ ಅದನ್ನು ಸ್ವಾಗತಿಸಿದ ಕೇಂದ್ರ ರೈಲ್ವೆ ಖಾತೆ ವಿ.ಸೋಮಣ್ಣ ಮಾತನಾಡಿ, ಕೇಂದ್ರ ಸರ್ಕಾರ ಸಾರ್ಜನಿಕರಿಗಾಗಿ ರೈಲ್ವೆ ಸೇವೆಗಳನ್ನು ಸುಧಾರಿಸಲು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗಳಿಸಲು ಈಗಾಗಲೇ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಕೊಂಕಣ ರೈಲ್ವೆ ಸಂಪರ್ಕ ಮಹಾರಾಷ್ಟ್ರದಿಂದ ಕೇರಳದವರೆಗೆ ವ್ಯಾಪಿಸಿದ್ದು, ನಮ್ಮ ರಾಜ್ಯದಲ್ಲಿ ಸುಮಾರು 742 ಕಿ.ಮೀ. ನಷ್ಟು ಸಂಚಾರವನ್ನು ಕಲ್ಪಿಸಿದೆ. ಅಲ್ಲದೆ ಕೊಂಕಣ ಭಾಗದ ಜನರು ಪ್ರಯಾಣಿಸಲು ಮತ್ತಷ್ಟು ಸೇವೆಗಳನ್ನು ಒದಗಿಸುವ ಅವಶ್ಯಕತೆ ಇದೆ. ಹೀಗಾಗಿ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಕುರಿತು, ಈ ಸೇವೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ವಿಲೀನ ವಿಚಾರ ಕುರಿತು ಅನ್ಯ ರಾಜ್ಯಗಳೊಂದಿಗೆ ಚರ್ಚೆ: ವಿ.ಸೋಮಣ್ಣ

ಕೊಂಕಣ ರೈಲ್ವೆ ವಿಲೀನ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಕರ್ನಾಟಕ, ಕೇರಳ ಹಾಗೂ ಗೋವಾ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಅಲ್ಲದೆ ಈ ವಿಚಾರವಾಗಿ ಮಹಾರಾಷ್ಟ್ರ ರಾಜ್ಯಕ್ಕೆ ಮನವರಿಕೆ ಮಾಡಿಕೊಟ್ಟ ಬಳಿಕ, ವಿಲೀನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ರಾಜ್ಯಗಳಲ್ಲಿ ಈ ಹಿಂದೆ ಶೇ.50ರಷ್ಟು ಭಾಗದ ಕೊಡುಗೆಯೊಂದಿಗೆ ರಾಜ್ಯದ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿತ್ತು. ಆದರೆ ಪ್ರಸ್ತುತವಾಗಿ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ ದೊರೆಯುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರವೇ ರೈಲ್ವೆಯ ಎಲ್ಲಾ ವೆಚ್ಚವನ್ನು ಭರಿಸಲು ತೀರ್ಮಾನಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಬಾಕಿ ಇರುವ ಯೋಜನೆಗಳು ಶೀಘ್ರವೇ ಪೂರ್ಣವಾಗಲಿವೆ
ಮುಂದಿನ ಮೂರು ವರ್ಷಗಳಲ್ಲಿ ಧಾರವಾಡ-ಬೆಳಗಾವಿ ನಡುವೆ ನೇರ ಸಂಪರ್ಕದ ರೈಲ್ವೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಅಲ್ಲದೆ ಬಾಕಿ ಇರುವ ಯೋಜನೆಗಳನ್ನು ಅತಿ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ರೈಲ್ವೆ ಇಲಾಖೆಗೆ ಮುಂದಿನ ಮೂರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ಹಸ್ತಾಂತರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

23 seconds ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

14 mins ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

4 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

4 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

4 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

4 hours ago