ದಕ್ಷಿಣ ಕೊರಿಯಾ: ಇಲ್ಲಿನ ಮಯೂನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೀಡಾದ ಜೆಜು ಏರ್ ವಿಮಾನ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.
ವಿಮಾನವು ಲ್ಯಾಂಡ್ ಆಗುವ ವೇಳೆ ವೇಗವಾಗಿ ಬಂದು ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ವಿಮಾನ ತಕ್ಷಣವೇ ಹೊತ್ತಿ ಉರಿದಿದೆ.
ಬ್ಯಾಂಕಾಕ್‌ನಿಂದ ಬಂದ ಈ ವಿಮಾನದಲ್ಲಿ 175 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿಗಳಿದ್ದರು. ದುರಂತ ನಡೆದ ಬಳಿಕ ಇದುವರೆಗೂ ಕೇವಲ ಇಬ್ಬರನ್ನೂ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ದುರಂತದ ಬೆನ್ನಲ್ಲೇ ಜೆಜು ಏರ್ ಸಂಸ್ಥೆ ಕ್ಷಮೆಯಾಚಿಸಿದ್ದು, ಮಯೂನ್ ವಿಮಾನ ದುರಂತದಲ್ಲಿ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ದುರಂತದ ಬಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಇನ್ನು ಸಂತ್ರಸ್ತರ ಕುಟುಂಬದವರಿಗೆ ನೆರವಾಗುವ ಸಲುವಾಗಿ ಜಿಯೋಲ್ಲನಮ್-ಡೊ ಪ್ರಾಂತ್ಯದಲ್ಲಿ ತಾತ್ಕಾಲಿಕವಾಗಿ ವಿಶೇಷ ರೈಲು ಕಾರ್ಯಾಚರಣೆ ಆರಂಭಿಸುವುದಾಗಿ ಕೊರಿಯಾ ರೈಲ್ವೆ ತಿಳಿಸಿದೆ.
ಇದರ ಜೊತೆಗೆ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ಶವಾಗಾರವನ್ನು ಸ್ಥಾಪಿಸಲಾಗಿದ್ದು, ಸದ್ಯ ಅಲ್ಲಿ 94 ಶವಗಳನ್ನು ಇರಿಸಲಾಗಿದೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮೈಸೂರು: ನಗರದ ಇನ್ಫೋಸಿಸ್ ಕ್ಯಾಂಪಸ್ ಆವರಣದಲ್ಲಿ ನಿನ್ನೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಇಂದು…
ವಾಷಿಂಗ್ಟನ್: ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ…
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.…
ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸಾರ್ವಜನಿಕರು ಶಾಂತಿಯುತವಾಗಿ ಹೊಸ ವರ್ಷಾಚರಣೆಯನ್ನು ಸಂಭ್ರಮಿಸಿದ್ದಾರೆ ಎಂದು…
ಮೈಸೂರು: ಇಂದಿನಿಂದ 2025ರ ಹೊಸ ವರ್ಷ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭಾಶಯ ಕೋರಿದ್ದಾರೆ.…
ಧರ್ಮ ಕೀರ್ತಿರಾಜ್ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್ ಆಗಮಿಸಿ…