ನವದೆಹಲಿ : ಕೆ.ಆರ್ ನಗರದ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್ ಐಟಿ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.
ಸಂತ್ರಸ್ತ ಮಹಿಳೆಯನ್ನ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣರ ಬಂಧನವಾಗಿತ್ತು. ಬಳಿಕ ಭವಾನಿ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲ್ಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿತ್ತು.
ಇನ್ನು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದನ್ನ ಪ್ರಶ್ನಿಸಿ ಎಸ್ ಐಟಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಎಸ್ ಐಟಿ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಸುಪ್ರೀಂಕೋರ್ಟ್ ನ್ಯಾ.ಸೂರ್ಯಕಾಂತ್, ನ್ಯಾ.ಉಜ್ವಲ್ ಭುಯಾನ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಪೀಠವು ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಿದೆ.
ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʻಎʼ ಮತ್ತು ʻಬಿʼ ವೃಂದದ 384 ಹುದ್ದೆಗಳ ಮುಖ್ಯ ಪರೀಕ್ಷಾ ವೇಳಾಪಟ್ಟಿಯು…
ಬೆಂಗಳೂರು : ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು(ಏ.17)ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಯಾವುದೇ…
ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು…
ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ…
ಕಳೆದ ವರ್ಷ ‘ಅಪ್ಪಾ ಐ ಲವ್ ಯು’ ಚಿತ್ರದಲ್ಲಿ ಸಂಜಯ್ ಎಂಬ ಜಿಮ್ ಟ್ರೈನರ್, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ…
ಹೀರೋ ಆಗಬೇಕೆಂಬ ಸುನಾಮಿ ಕಿಟ್ಟಿಯ ಕನಸು ಕೊನೆಗೂ ನಾಳೆ (ಏಪ್ರಿಲ್ 18) ನನಸಾಗುತ್ತಿದೆ. ಸುಮಾರು ಒಂದು ದಶಕದ ಹಿಂದೆಯೇ ಸುನಾಮಿ…