ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ.
ಈವರೆಗೆ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ.ನವೀನ್‌ಕುಮಾರ್ ಅವರನ್ನು ವರ್ಗ ಮಾಡಿ, ಮಂಗಳೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜಿಸಲಾಗಿದೆ. ಈ ಹಿಂದಿನ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ್ ವಿರುದ್ಧ ಆರೋಪಗಳ ಹಿನ್ನೆಲೆಯಲ್ಲಿ ಏಳು ತಿಂಗಳ ಹಿಂದೆ ನವೀನ್‌ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ವಿಶ್ವವಿದ್ಯಾಲಯದ ನೇಮಕಾತಿ ಸಂಬಂಧ ಆರೋಪಗಳ ಕುರಿತು ನ್ಯಾ.ಪಾಟೀಲ ಅವರ ನೇತೃತ್ವದ ಸಮಿತಿ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲೇ ಈ ವರ್ಗಾವಣೆ ನಡೆದಿದೆ.
2006ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ ಎಸ್.ಕುಸುಮಾಕುಮಾರಿ ಅವರು, ಮೈಸೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ನಗರಪಾಲಿಕೆ ವಲಯ-6ರ ಸಹಾಯಕ ಆಯುಕ್ತರಾಗಿ, ಕಬಿನಿ ಭೂಸ್ವಾಧಿನಾಧಿಕಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಒಂದು ತಿಂಗಳ ಹಿಂದೆ ಹೆಚ್ಚುವರಿ ಆಯುಕ್ತ ಹುದ್ದೆಯಿಂದ ಬಿಡುಗಡೆಯಾಗಿ ಹುದ್ದೆ ನಿರೀಕ್ಷೆಯಲ್ಲಿದ್ದರು. ಸರ್ಕಾರದ ಆದೇಶ ಶನಿವಾರವೇ ತಲುಪಿದ್ದು, ಭಾನುವಾರ ರಜೆ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…