Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

ಕುಂಭಮೇಳ ಕಾಲ್ತುಳಿತ | ಸುರಕ್ಷತಾ ಮಾರ್ಗ ಕೋರಿ ಸಲ್ಲಿಸಿದ್ದ ಪಿಐಎಲ್‌ ವಿಚಾರಣಗೆ ʻಸುಪ್ರೀಂʼ ನಕಾರ

ಹೊಸದಿಲ್ಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮ ಮತ್ತು ಮಾರ್ಗ ಸೂಚಿಗಳನ್ನುನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)‌ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಪ್ರಯಾಗ್‍ರಾಜ್ ಮಹಾಕುಂಭದಲ್ಲಿ ನಡೆದ ಭೀಕರ ಕಾಲ್ತುಳಿತವು ದುರದುಷ್ಟಕರ ಸಂಗತಿಯಾಗಿದೆ ಎಂದು ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್‍ಕುಮಾರ್ ಅವರಿದ್ದ ಪೀಠವು ಹೇಳಿದೆ. ಆದರೆ, ಈ ಸಂಬಂಧ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‍ಗೆ ಹೋಗಿ ಎಂದು ಹೇಳಿದೆ.

ಉತ್ತರಪ್ರದೇಶ ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಘಟನೆಯ ಕುರಿತು ತನಿಖೆ ನಡೆಸಲು ಈಗಾಗಲೇ ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಿದರು. ಜನವರಿ 29 ರಂದು ಮಹಾಕುಂಭದಲ್ಲಿ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು, 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಪಿಐಎಲ್ ಸಲ್ಲಿಸಿದ್ದರು.

ಜನವರಿ 29ರಂದು ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಾಲ್ತುಳಿತದಿಂದ 30 ಜನರು ಸಾವನ್ನಪ್ಪಿದ ನಂತರ, ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಮಹಾಕುಂಭದಲ್ಲಿ ಸೂಕ್ತ ರಕ್ಷಣೆ, ಭದ್ರತೆಯನ್ನು ಒದಗಿಸುವಂತೆ ಮನವಿ ಮಾಡಿದ್ದರು.

Tags: