ಹೊಸದಿಲ್ಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮ ಮತ್ತು ಮಾರ್ಗ ಸೂಚಿಗಳನ್ನುನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಯಾಗ್‍ರಾಜ್ ಮಹಾಕುಂಭದಲ್ಲಿ ನಡೆದ ಭೀಕರ ಕಾಲ್ತುಳಿತವು ದುರದುಷ್ಟಕರ ಸಂಗತಿಯಾಗಿದೆ ಎಂದು ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್‍ಕುಮಾರ್ ಅವರಿದ್ದ ಪೀಠವು ಹೇಳಿದೆ. ಆದರೆ, ಈ ಸಂಬಂಧ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‍ಗೆ ಹೋಗಿ ಎಂದು ಹೇಳಿದೆ.
ಉತ್ತರಪ್ರದೇಶ ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಘಟನೆಯ ಕುರಿತು ತನಿಖೆ ನಡೆಸಲು ಈಗಾಗಲೇ ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಿದರು. ಜನವರಿ 29 ರಂದು ಮಹಾಕುಂಭದಲ್ಲಿ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು, 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಪಿಐಎಲ್ ಸಲ್ಲಿಸಿದ್ದರು.
ಜನವರಿ 29ರಂದು ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಾಲ್ತುಳಿತದಿಂದ 30 ಜನರು ಸಾವನ್ನಪ್ಪಿದ ನಂತರ, ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಮಹಾಕುಂಭದಲ್ಲಿ ಸೂಕ್ತ ರಕ್ಷಣೆ, ಭದ್ರತೆಯನ್ನು ಒದಗಿಸುವಂತೆ ಮನವಿ ಮಾಡಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…