ಆಂಧ್ರಪ್ರದೇಶ: ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಈತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದನು ಎನ್ನಲಾಗಿದೆ.
10ನೇ ತರಗತಿ ಪಾಸ್ ಆಗಿರುವ ನಕಲಿ ಅಂಕಪಟ್ಟಿ ಸಲ್ಲಿಸಿ ಡಿಎಲ್ ಪಡೆದಿದ್ದನು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಬಸ್ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಇದನ್ನು ಓದಿ: ಕರ್ನೂಲ್ ಬಸ್ ದುರಂತ : 11 ಜನರ ಗುರುತು ಪತ್ತೆ..
ಪ್ರಕರಣದ ಹಿನ್ನೆಲೆ: ಕರ್ನೂಲ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 19 ಪ್ರಯಾಣಿಕರು ಸಜೀವ ದಹನವಾಗಿದ್ದರು. 12 ಜನರು ಗಂಭೀರ ಗಾಯಗೊಂಡಿದ್ದಾರೆ.
ದುರಂತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ.





