Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಮಾಜಿ ಉಪಪ್ರಧಾನಿ ಅಡ್ವಾಣಿಗೆ ಮತ್ತೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿಗೆ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಳೆದ ಬುಧವಾರ ಕೂಡಾ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮಾರನೇ ದಿನ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅಡ್ವಾಣಿ ಅವರಲ್ಲಿ ಮರಳಿ ಅನಾರೋಗ್ಯ ಕಾಣಿಸಿಕೊಂಡಿದೆ.

ಸದ್ಯ ಅಡ್ವಾಣಿ ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ನಿಗಾ ಇಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

3 ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ, ಒಮ್ಮೆ ಕೇಂದ್ರ ಗೃಹ ಸಚಿವರಾಗಿ, ಒಮ್ಮೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಹಿರಿಮೆ ಹೊಂದಿರುವ ಅಡ್ವಾಣಿ ಅವರು ಸಲ್ಲಿಸಿರುವ ದೇಶಸೇವೆ ಪರಿಗಣಿಸಿ ಅವರಿಗೆ ಕೆಲ ದಿನಗಳ ಹಿಂದಷ್ಟೇ ಭಾರತ ರತ್ನ ಪ್ರಕಟಿಸಲಾಗಿತ್ತು. ಆದರೆ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ವಯೋಸಹಜ ಕಾರಣಗಳಿಂದ ಬರಲಾಗದ ಹಿನ್ನೆಲೆಯಲ್ಲಿ ಸ್ವತಃ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಡ್ವಾಣಿ ಮನೆಗೆ ತೆರಳಿ ಪ್ರಶಸ್ತಿ ಪ್ರಧಾನ ಮಾಡಿ ಬಂದಿದ್ದರು.

 

Tags: